Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ದಾಂಡ್ಗ್ಯಾ ಮಾನ್ಸಾನ್ ಅನಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಪಾವ್ಲುಕ್ ಉದ್ದ್ಯಾಚ್ಯಾ ಝಡ್ತಿ ಕರ್‍ತಲ್ಯಾ ಬೈಟಕಿಕ್ ಬಲ್ವುನ್ ಹಾನುಕ್ ತುಜ್ಯಾಕ್ಡೆ ಮಾಗುನ್ ಘೆವ್ಕ್ ಮನುನ್ ನಿರ್ಧಾರ್ ಕರ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:20
8 ತಿಳಿವುಗಳ ಹೋಲಿಕೆ  

ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು