ಅಪೊಸ್ತಲರ ಕೃತ್ಯಗಳು 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತೆಂಕಾ ವಿಶ್ವಾಸ್ ಕರುನಕ್ಕೊ! ಪಾವ್ಲುಕ್ ಜಿವ್ ಕಾಡುಸಾಟಿ ಚಾಳಿಸಾಕ್ಕಿಂತಾಬಿ ಲೈ ಜುದೆವಾಂಚಿ ಲೊಕಾ ರಾಕುನ್ಗೆತ್ ನಿಪುನ್ ಬಸ್ಲಾತ್ ತೆಕಾ ಜಿವ್ ಕಾಡಿ ಪಾತರ್ ಕಾಯ್ಬಿ ಖಾಯ್ನಾತ್ ಅನಿ ಫಿಯ್ನಾತ್ ಮನುನ್ ಆನ್ ಥವ್ನ್ ತುಜ್ಯಾ ಒಪ್ಗಿಕ್ ವಾಟ್ ರಾಕುನ್ಗೆತ್ ಹಾತ್ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |