Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಜುದೆವಾಂಚಿ ಥೊಡಿ ಲೊಕಾ ಪಾವ್ಲುಕ್ ಜಿವ್ ಕಾಡುಚೆ ಮನುನ್ ಯೆವ್ಜನ್ ಕರುಲಾಗಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್, ಮಿಯಾ ತೆಕಾ ತುಜ್ಯಾ ಜಗ್ಗೊಳ್ ಧಾಡುನ್ ದಿಲಾ, ತೌವ್ಡೆಚ್ ನ್ಹಯ್ ತೆನಿ ಕರಲಿ ಚುಕಿಚಿ ಚಾಡಿಯಾ ತುಕಾ ಸಾಂಗುಕ್ ಸಾಂಗ್ತಲ್ಯಾ ಲೊಕಾಕ್ನಿ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:30
11 ತಿಳಿವುಗಳ ಹೋಲಿಕೆ  

“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.


ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.


“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.


ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು