Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:35
14 ತಿಳಿವುಗಳ ಹೋಲಿಕೆ  

ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.


ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,


ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.


ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.


ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.


ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು