ಅಪೊಸ್ತಲರ ಕೃತ್ಯಗಳು 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |