ಅಪೊಸ್ತಲರ ಕೃತ್ಯಗಳು 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಥೈ ಲೈ ಆವಾಜ್ ಹೊಲೊ, ಫಾರಿಜೆವಾಂಚ್ಯಾ ತಾಂಡಾತ್ಲಿ ಥೊಡಿ ಲೊಕಾ ಧರ್ಮ ಶಿಕಾಪಾ ಕರ್ತಲೆ ಉಟುನ್ ಇಬೆ ರಾವ್ನ್ ಹ್ಯಾ ಮಾನ್ಸಾಕ್ಡೆ ಅಮ್ಕಾ ಕಾಯ್ಬಿ ಚುಕ್ ದಿಸುನ್ ಯೆಯ್ನಾ ಹೊಲಾ! ಕಾಯ್ಕಿ ತೆಚ್ಯಾ ವಾಂಗ್ಡಾ ಬೊಲುಕ್ ಫಿರೆ ಮನುನ್ ವಾದ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |