Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮಿಯಾ ತುಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಹೆನಿ ಮಾಕಾ ಧರ್ಮಾಕ್ ವಿರೊದ್ ಕರ್‍ತಲೊ ಮನುನ್ ಸಾಂಗ್ತಲ್ಲ್ಯಾ ವಾಟೆನ್ ಚಲ್ತಲೊ ಮಿಯಾ ಅಮ್ಚ್ಯಾ ಪುರ್ವಜ್ಯಾಂಚ್ಯಾ ದೆವಾಕ್ ಆರಾದನ್ ಕರ್‍ತಾ, ಖರೆ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಅನಿ ಪ್ರವಾದ್ಯಾಂಚ್ಯಾ ಪುಸ್ತಕಾತ್ನಿ ಲಿವಲ್ಲೆ ಹೊತ್ತ್ಯಾ ಹರ್ ಎಕಾಕ್ಬಿ ಮಿಯಾ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:14
44 ತಿಳಿವುಗಳ ಹೋಲಿಕೆ  

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.


ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,


ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.


ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,


ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.


“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.


“ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.


ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು