Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಫೆಲಿಕ್ಸಾನ್ ಜೆಜುಚ್ಯಾ ವಾಟೆಚ್ಯಾ ವಿಶಯಾಚ್ಯಾ ಅದ್ದಿಚ್ ಪಾಜೆ ತವ್ಡೆ ಅರ್ಥ್ ಕರುನ್ ಘೆಟಲ್ಯಾನ್ ಅನಿ ತೆನಿ ಇಚಾರ್ನೆ ಹೊತಲೆ ಅರ್ದ್ಯಾಕುಚ್ ಇಬೆಕರುನ್ “ಸೈನಿಕಾಂಚೊ ಮುಖಂಡ್ ಲುಸಿಯಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ನಿರ್ದಾರ್ ಕರ್‍ತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:22
11 ತಿಳಿವುಗಳ ಹೋಲಿಕೆ  

ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.


ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.


ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,


ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,


ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,


ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು