ಅಪೊಸ್ತಲರ ಕೃತ್ಯಗಳು 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ಸ್ವಂತ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಥೊಡಿ ದಿಸಾ ಹೊಲ್ಲ್ಯಾ ಮಾನಾ ಫೆಲಿಕ್ಸ್ ಆಪ್ಲಿ ಬಾಯ್ಕೊ ದ್ರುಸಿಲ್ಲ್ಯಾ ವಾಂಗ್ಡಾ ಯೆಲೊ. ತಿ ಜುದೆವಾಂಚಿ ಹೊಲ್ಲಿ ಫೆಲಿಕ್ಸಾನ್ ಪಾವ್ಲುಕ್ ಬಲ್ವುಕ್ ಲಾವ್ಲ್ಯಾನ್, ಅನಿ ಕ್ರಿಸ್ತ್ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ವಿಶಯಾತ್ ಪಾವ್ಲುನ್ ಸಾಂಗಲೆ ತೆನಿ ಆಯ್ಕಲ್ಲ್ಯಾನ್. ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.