ಅಪೊಸ್ತಲರ ಕೃತ್ಯಗಳು 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಪಾವ್ಲು ಥೈತ್ನಾ ಜಾವ್ನ್ ಖರೆಪಾನಾಚ್ಯಾ ವಿಶಯಾತ್ ಚರ್ಚಾ ಕರುನ್ ಸ್ವನಿಯಂತ್ರನ್ ಅನಿ ಪಿಡೆ ಯೆತಲ್ಲ್ಯಾ ಝಡ್ತಿಚ್ಯಾ ದಿಸಾಚ್ಯಾ ವಿಶಯಾತ್ ಬೊಲ್ತಾನಾ ಫೆಲಿಕ್ಸಾನ್ ಭಿಂವ್ನ್, “ಅತ್ತಾ ತಿಯಾ ಜಾ! ಮಾಕಾ ಅವಕಾಸ್ ಗಾವಲ್ಲ್ಯಾ ತನ್ನಾ ತುಕಾ ಬಲ್ವುತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |