Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾವ್ಲುನ್, “ಅತ್ತಾ ಮಿಯಾ ಸಿಸರಾಚ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಚ್ಯಾ ಫಿಡ್ಯಾತ್ ಇಬೆ ಹಾಯ್ ಮಾಕಾ ಹಿತ್ತೆಚ್ ನಿರ್ದಾರ್ ಹೊವ್ಚೆ ಮಿಯಾ ಜುದೆವಾಂಚ್ಯಾ ಲೊಕಾಕ್ನಿ ಕಾಯ್ಬಿ ಚುಕ್ ಕರುಕ್ನಾ ಹೆ ಖರೆಚ್ ಮನ್ತಲೆ ತುಕಾ ಅನಿ ತುಜ್ಯಾ ವಾಂಗ್ಡಿಯಾಕ್ನಿ ಲೈ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:10
12 ತಿಳಿವುಗಳ ಹೋಲಿಕೆ  

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.


“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.


ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.


ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು