Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಮಿಯಾ, ಚುಕ್ ದಾಕ್ವುಲ್ಲ್ಯಾ ಮಾನ್ಸಾಕ್ ಝಡ್ತಿ ಕರುಕ್‍ ಸಾಟ್ನಿ ದುಸ್ರ್ಯಾಕ್ನಿ ಒಪ್ಪಸ್ತಲೆ ರೊಮನ್ ಲೊಕಾಂಚಿ ಪದ್ದತ್ ನ್ಹಯ್, ಅದ್ದಿ ತೆನಿ ಅಪ್ನಾಚೆರ್ ಚುಕ್ ಸಾಂಗುಕ್ ಲಾಗಲ್ಯಾಕ್ನಿ ಇದ್ರಾಕ್ ಬದ್ರಾಕ್ ಭೆಟುನ್ ಅಪ್ಲಿ ಚುಕ್ ಸಾಂಗ್ತಲಿ ಹೊತ್ತಿ ಸಾಂಗುಕ್ ಅವ್ಕಾಸ್ ಕರುನ್ ದಿವ್ಚೆ ಮನುನ್ ಮಿಯಾ ಸಾಂಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:16
11 ತಿಳಿವುಗಳ ಹೋಲಿಕೆ  

ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.


ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;


ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.


ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.


ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು