Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರ ಮತದ ವಿಷಯದಲ್ಲಿಯೂ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. ಆ ಯೇಸು ಜೀವಿತನಾಗಿದ್ದಾನೆಂದು ಪೌಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಸಾಂಗಲಿ ಸಂಗ್ತಿಯಾ ತೆಂಚ್ಯಾ ಸ್ವತಾಚ್ಯಾ ಧರ್ಮಾಕ್ ಸಮಂದ್ ಪಡಲಿ ಹೊತ್ತಿ, ಅನಿ ಜೆಜು ಮನ್ತಲ್ಯಾ ಮಾನ್ಸಾಕ್ ಸಮಂದ್ ಪಡಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:19
14 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,


ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು