Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ಹೆಕಾ ಇಚಾರ್ನಿ ಕರ್‍ತಾನಾ ಹೆಜ್ಯಾಕ್ಡೆ ಕಾಯ್ಬಿ ಚುಕ್ ದಿಸುಕ್ನಾ, ಖರೆ ಸಿಸರಾನುಚ್ ಮಾಕಾ ವಿಚಾರ್ನಿ ಕರುಚೆ ಮನುನ್ ಹೆನಿ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್ ಹೆಕಾ ರೊಮಾಕ್ ಧಾಡುಚೆ ಮನುನ್ ಮಿಯಾ ನಿರ್ದಾರ್ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:25
11 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.


ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.


“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.


ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.


ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು