Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೌಲನು - ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ ದೇವಾಲಯದ ವಿಷಯದಲ್ಲಾಗಲಿ ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು ಪ್ರತ್ಯುತ್ತರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪಾವ್ಲುನ್ ಪರ್ತುನ್ ವಾದ್ ಕರುನ್ “ಮಿಯಾ ಜುದೆವಾಂಚ್ಯಾ ಖಾಯ್ದ್ಯಾಕ್ನಿ ಹೊಂವ್ದಿ, ದೆವಾಚ್ಯಾ ಗುಡಿಕ್ ಹೊಂವ್ದಿ, ಅನಿ ಸಿಸರಾಕ್ ಹೊಂವ್ದಿ ವಿರೊದ್ ಹೊವ್ನ್ ಕಸ್ಲಿಬಿ ಚುಕ್ ಕರುಕ್ನಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:8
13 ತಿಳಿವುಗಳ ಹೋಲಿಕೆ  

ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು