Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ದಮಸ್ಕಾಚ್ಯಾ ವಾಟೆನ್ ಜಾಯ್ತ್ ಹೊತ್ತೊ, ತನ್ನಾ ದೊಪಾರ್ ಹೊಲ್ಲಿ ತಾಬೊಡ್ತೊಬ್ ತನ್ನಾ ಮಳ್ಬಾಕ್ನಾ ದಿಸಾಚ್ಯಾ ಕಿಂತಾ ಹೊಳಾವ್ತಲೊ ಉಜ್ವೊಡ್ ಯೆವ್ನ್ ಮಾಜ್ಯಾ ಅನಿ ಮಾಜ್ಯಾ ವಾಂಗ್ಡಾ ಪ್ರಯಾನ್ ಕರ್ತಾಲ್ಯಾಚ್ಯಾ ಬೊತ್ಯಾನ್ ಹೊಳಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:13
10 ತಿಳಿವುಗಳ ಹೋಲಿಕೆ  

ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.


“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.


ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.


ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,


ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು