Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವು ನೆರವೇರುವದೆಂಬ ನಿರೀಕ್ಷೆಯನ್ನು ಕುರಿತೇ ವಿಚಾರಿಸಲ್ಪಡುವವನಾಗಿ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಅಮ್ಕಾ ಪುರ್ವಜ್ ಲೊಕಾಕ್ನಿ ಕರಲ್ಲ್ಯಾ ಗೊಸ್ಟಿಕ್ನಿ ಮಿಯಾ ಬರೊಸೊ ಥವಲ್ಯಾ ಸಾಟ್ನಿಚ್ ಅತ್ತಾ ಝಡ್ತಿ ಕರುಕ್ ಗುರಿ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:6
59 ತಿಳಿವುಗಳ ಹೋಲಿಕೆ  

ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?


ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.


ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು