Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ನಜರೆತಾಚ್ಯಾ ಜೆಜುಚ್ಯಾ ನಾವಾನ್ ವಿರೊಧ್ ಹೊವ್ನ್ ಲೈ ಸಗ್ಳ್ಯಿ ಕಾಮಾ ಕರುಚೆ ಮನುನ್ ಯೆವಜಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:9
16 ತಿಳಿವುಗಳ ಹೋಲಿಕೆ  

“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.


ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.


ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು