Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:13
10 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,


ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?


ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.


ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು