Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನೇಕ ದಿವಸಗಳ ತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ಅಂದಿನಿಂದ ಕಳೆದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ಲೈ ದಿಸಾಂಚ್ಯಾ ಪತರ್ ದಿಸ್ ಹೊಂವ್ದಿ ನಾಹೊಲ್ಯಾರ್ ಚಿಕ್ಕಿಯಾ ಹೊಂವ್ದಿ ಬುಗುಕ್ ಹೊವ್ಕ್ ನಾ ಮೊಟೊ ವಾರೊ ಭಯಾನಕ್ ಹೊತ್ತೊ ,ಅಮಿ ಜಿವಾನಿ ರಾತಾಂವ್, ಮನ್ತಲೊ ಬರೊಸೊ ಕಳ್ದುನ್ ಘೆಟ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:20
15 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.


ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.


ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.


ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು