ಅಪೊಸ್ತಲರ ಕೃತ್ಯಗಳು 27:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಖರೆ ಮೊಟಿ ಢೊನ್ ರೆತಿಚ್ಯಾ ಗುಡ್ಯಾಕ್ ಆಡ್ಲುನ್ ಢೊನಾಚೊ ಫಿಡ್ಲೊ ಭಾಗ್ ರೆತಿತ್ ಸಿರ್ಕುನ್ ಪಡಲ್ಯಾಕ್ ಢೊನ್ ಚಾಲ್ವುಕ್ ಹೊವ್ಕ್ ನಾ, ಮಾನಾ ಮೊಟಿ ಲಾಟಾ ಯೆವ್ನ್ ಢೊನಾಚ್ಯಾ ಫಾಟ್ಲ್ಯಾ ಭಾಜುಕ್ ಮಾರುನ್ ತುಕ್ಡೆ ತುಕ್ಡೆ ಕರುನ್ ಟಾಕುಕ್ ಲಾಗ್ಲೆ. ಅಧ್ಯಾಯವನ್ನು ನೋಡಿ |