Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಥೈ ಥೊಡಿ ದೆವಾಚ್ಯಾ ತಾಂಡ್ಯಾಚಿ ಲೊಕಾ ಹೊತ್ತಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಎಕ್‍ ವಾರ್ ತರಿಬಿ ರಾವ್ಚೆ ಮನುನ್ ಸಾಂಗ್ಲ್ಯಾನಿ, ಆಕ್ರಿಕ್ ಅಮಿ ರೊಮ್ ಶಾರಾಕ್ ಯೆಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:14
17 ತಿಳಿವುಗಳ ಹೋಲಿಕೆ  

ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.


ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.


ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.


ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.


ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು