Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ಅಮಿ ರೊಮ್ ಶಾರಾಕ್ ಪಾಲ್ಲ್ಯಾಂವ್ ಥೈ ಪಾವ್ಲುಕ್ ಅಮ್ಚ್ಯಾಕ್ನಾ ಯೆಗ್ಳುನ್ ರ್‍ಹಾವ್ಕ್ ಅವಕಾಸ್ ದಿವ್ನ್ ಹೊಲ್ಲೆ ಖರೆ ಎಕ್ ಸೈನಿಕ್ ತೆಕಾ ರಾಕ್ವಲಿ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:16
18 ತಿಳಿವುಗಳ ಹೋಲಿಕೆ  

ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.


ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”


“ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.


ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,


ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.


ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು