Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ನೀನು ಆ ಜನರ ಬಳಿಗೆ ಹೋಗಿ ಅವರಿಗೆ ಇಂತೆನ್ನು: ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರೀ ಜನರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ಪಿತೃಗಳಿಗೆ ವಿಹಿತವಾಗಿ ಹೇಳಿದ್ದೇನಂದರೆ - ನೀನು ಈ ಜನರ ಬಳಿಗೆ ಹೋಗಿ ಅವರಿಗೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ ಎಂಬದಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ಜಾ ಅನಿ ಹ್ಯಾ ಲೊಕಾಕ್ನಿ ಅಶೆ ಸಾಂಗ್ ತೆ ಕಾಯ್ ಮಟ್ಲ್ಯಾರ್, ತುಮಿ ಆಯಿಕ್ತ್ಯಾಸಿ ಖರೆ ಕಳ್ವುನ್ ಘೆಯ್ನ್ಯಾಸಿ, ಬಗ್ತ್ಯಾಸಿ ಖರೆ ತುಮ್ಕಾ ದಿಸಿನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:26
20 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.


ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು