ಅಪೊಸ್ತಲರ ಕೃತ್ಯಗಳು 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ತಂದು ಬೆಂಕಿಯ ಮೇಲೆ ಹಾಕುತ್ತಿದ್ದಾಗ ಬೆಂಕಿಯ ಶಾಖಕ್ಕೆ ವಿಷಸರ್ಪವೊಂದು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಪಾವ್ಲುನ್ ಎಕ್ ನಾಕ್ಡಾಂಚೆ ವಜ್ಜೆ ಕರುನ್ ತೆ ಆಗಿರ್ ಥವ್ತಾನಾ ಆಗಿಚ್ಯಾ ಝಳಾಕ್ ಎಕ್ ವಿಶಾಚೊ ಸಾಪ್ ಭಾಯ್ರ್ ಯೆವ್ನ್ ಪಾವ್ಲುಚ್ಯಾ ಹಾತಿಕ್ ಸುತ್ತ್ ಘಾಲುನ್ ಧರುನ್ ಘೆಟ್ಲೊ. ಅಧ್ಯಾಯವನ್ನು ನೋಡಿ |