Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ನಿತಿವಂತ್ ಬರೊ, ಅನಿ ಪವಿತ್ರ್ ಹೊವ್ನ್ ಹೊತ್ತೊ, ಜಾಲಾರ್ಬಿ ತುಮಿ ತೆಕಾ ತಿರಸ್ಕಾರ್ ಕರುನ್ ಜೆಜುಚ್ಯಾ ಬದ್ಲಾಕ್ ಖುನಿಗಾರ್ ಬರಬ್ಬಾಕ್ ಸೊಡುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:14
22 ತಿಳಿವುಗಳ ಹೋಲಿಕೆ  

ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.


ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.


ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.


ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,


ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು