Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಶೆ ಕರುನ್ ತುಮಿ ಜಿವ್ ದಿತಲ್ಯಾಕುಚ್ ಜಿವಾನಿ ಮಾರುನ್ ಟಾಕ್ಲ್ಯಾಶಿ ಖರೆ ದೆವಾನ್ ತೆಕಾ ಮರ್ನ್ನಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನ್ ಹೆ ಸಗ್ಳ್ಯೆ ಅಮಿ ಡೊಳ್ಳ್ಯಾನಿ ಬಗಟ್ಲಾತ್. ಹೆಕಾ ತುಮಿ ಸಗ್ಳೆ ಸಾಕ್ಷಿ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:15
29 ತಿಳಿವುಗಳ ಹೋಲಿಕೆ  

ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.


ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು