ಅಪೊಸ್ತಲರ ಕೃತ್ಯಗಳು 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತುಮ್ಚ್ಯಾ ಇದ್ರಾಕ್ ಹೊತ್ತ್ಯಾ ಹ್ಯಾ ಮಾನ್ಸಾಚಿ ವಳಕ್ ತುಮ್ಕಾ ಸಗ್ಳ್ಯಾಕ್ನಿ ಹಾಯ್, ತೆಚ್ಯಾ ನಾವಾವರ್ತಿ ಥವಲ್ಯಾ ವಿಶ್ವಾಸಾ ವೈನಾ ಹೊ ಮಾನುಸ್ ಗುನ್ ಹೊಲಾ. ಹೆ ಸಗ್ಳೆ ತುಮಿ ಬಗುಲ್ಲ್ಯಾಸಿ. ಅಧ್ಯಾಯವನ್ನು ನೋಡಿ |