Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ಸೊಟ್ಟೊ ಹುಡಿ ಮಾರುನ್ ಅಪ್ಲ್ಯಾ ಪಾಂಯಾರ್ನ್ನಿ ಇಬೆ ರ್‍ಹಾಲೊ, ಅನಿ ಫಿರುನ್ ಖೆಳುಲಾಲೊ ಮಾನಾ ತೊ ಪೆದ್ರುಂಚ್ಯಾ ವಾಂಗ್ಡಾ ಚಲುನ್ಗೆತ್, ಹುಡಿಯಾ ಮಾರುಂಗೆತ್, ಅನಿ ದೆವಾಕ್ ಸ್ತುತಿ ಕರುಂಗೆತ್ ದೆವಾಚ್ಯಾ ಗುಡಿಚ್ಯಾ ಭುತ್ತುರ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:8
11 ತಿಳಿವುಗಳ ಹೋಲಿಕೆ  

“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.


ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.


ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು