Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಇದು ಜನರಲ್ಲಿ ಇನ್ನೂ ಹಬ್ಬದಂತೆ ಮುಂದೆ ಆ ಹೆಸರನ್ನು ಎತ್ತಿ ಯಾರ ಸಂಗಡಲೂ ಮಾತಾಡಬಾರದೆಂದು ಅವರನ್ನು ಬೆದರಿಸೋಣ ಎಂಬದಾಗಿ ಒಬ್ಬರ ಕೂಡೊಬ್ಬರು ಆಲೋಚನೆ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ಜೆಜುಚ್ಯಾ ವಿಶಯಾತ್ ಲೊಕಾಕ್ನಿ ಸಾಂಗುನಕಾಸಿ ಮನುನ್ ಹೆಂಕಾ ಅಮಿ ಬಿಂವ್ಸುಚೆ ತನ್ನಾ ಹಿ ಸಂಗ್ತಿಯಾ ಲೊಕಾಂಚ್ಯಾ ಮದ್ದಿ ಪಗ್ಳಿನಾ”, ಮನುನ್ ಬೊಲುನ್ ಘೆಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:17
25 ತಿಳಿವುಗಳ ಹೋಲಿಕೆ  

“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.


“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.


ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.


ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು