2 ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.