Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪೆದ್ರು ಅನಿ ಜುವಾಂವ್ ಥೈತ್ನಾ ಸುಟ್ಕಾ ಹೊಲ್ಯಾ ತನ್ನಾ ಪರ್ತುನ್ ಅಪ್ಲ್ಯಾ ತಾಂಡ್ಯಾಕ್ ಗೆಲೆ, ಅನಿ ಮುಖ್ಯಯಾಜಕಾನ್ ಅನಿ ಜುದೆವಾಂಚ್ಯಾ ಮುಖಂಡಾನಿ ತೆಂಕಾ ಸಾಂಗಲ್ಲೆ ಹರ್ ಎಕ್‍ಬಿ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಸಾಂಗ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:23
12 ತಿಳಿವುಗಳ ಹೋಲಿಕೆ  

ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.


ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು