Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29-30 ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಧನಿಯಾ ಅತ್ತಾ ತೆನಿ ಸಾಂಗುಲಾಗಲೆ ಆಯ್ಕ್ ತೆನಿ ಅಮ್ಕಾ ಭಿಂವ್‍ಸುಕ್ ಬಗುಲಾಲಾತ್! ಧನಿಯಾ ಅಮಿ ತುಜಿ ಸೆವಕಾ ತುಜಿ ಗೊಸ್ಟಿಯಾ ಭಿಂಯೆ ನಸ್ತಾನಾ ಸಾಂಗುಕ್ ಅಮ್ಕಾ ಮಜತ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:29
27 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು