Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಧನಿಯಾ ಜೆಜು ಮರಲ್ಲ್ಯಾ ಕನ್ನಾ ಝಿತ್ತೊ ಹೊಲ್ಲೊ ಖರೆಚ್ ಮನ್ತಲೆ ಅಪೊಸ್ತಲಾನಿ ಲೊಕಾಕ್ನಿ ಸಾಂಗಿತ್ ದೆವಾನ್ ಅಪ್ಲ್ಯಾ ಲೊಕಾಕ್ನಿ ಮೊಟೊ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:33
14 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು