ಅಪೊಸ್ತಲರ ಕೃತ್ಯಗಳು 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕಾವಲಿನ ಮನೆ ಪೂರ್ಣ ಭದ್ರವಾಗಿ ಮುಚ್ಚಿರುವದನ್ನೂ ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 “ಬಂಧಿಖಾನೊ ದಾಪಲ್ಲೊ ಹೊತ್ತೊ, ಅನಿ ಚಾವಿ ಲಾವಲ್ಲಿ ಹೊತ್ತಿ ರಾಕ್ವಾಲಿ ದಾರಾಚ್ಯಾ ಜಗ್ಗೊಳ್ ಇಬೆ ಹೊತ್ತೆ, ಖರೆ ಅಮಿ ಧಾರ್ ಕಾಡುನ್ ಬಗಲ್ಲ್ಯಾ ತನ್ನಾ ಬಂದಿಖಾನೊ ಖಾಲಿ ಹೊತ್ತೊ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |