Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಅಧಿಕಾರಿನಿ ಅನಿ ಲೊಕಾನಿ ಜಾವ್ನ್ ಅಪೊಸ್ತಲಾಕ್ನಿ ಬಲ್ವುನ್ ಹಾನ್ಲ್ಯಾನಿ , ಖರೆ ಸೈನಿಕಾನಿ ವತ್ತಾಯ್ ಕರುಕ್ ನಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂವ್‍ಲ್ಲ್ಯಾನಿ ಲೊಕಾಕ್ನಿ ರಾಗ್ ಯೆವ್ನ್ ಗುಂಡೆ ಮಾರುನ್ ಅಪ್ನಾಕ್ನಿ ಜಿಂವ್ ಕಾಡ್ತಿಲ್ ಮನುನ್ ಭಿಂವ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:26
13 ತಿಳಿವುಗಳ ಹೋಲಿಕೆ  

ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,


“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.


‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.


ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.


ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.


ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,


ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು