Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪೆದ್ರುನ್ ತೆಕಾ ಅನನಿಯಾಕ್ , ತುಜೆ ಸೆತ್ ಇಕುನ್ ಗಾವಾಲ್ಯಾ ಪೈಸಾತ್ ನಿಪ್ವುನ್ ಥವ್ನ್ ಘೆವ್ನ್ ಪವಿತ್ರ್ ಆತ್ಮ್ಯಾಕ್ ಮೊಸ್ ಕರ್ತೆ ಕಾಯ್ ಅನಿ ತುಜ್ಯಾ ಮನಾತ್ ಸೈತಾನಾಕ್ ಜಾಗೊ ದಿವಲ್ಲೆ ನ್ಹಯ್ ಮನುನ್ ಸಾಂಗ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:3
25 ತಿಳಿವುಗಳ ಹೋಲಿಕೆ  

ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.


ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.


ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.


ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.


ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು