Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಇಸ್ರಾಯೆಲಾಚಿ ಲೊಕಾ ಪಾಪಾಸಾಟಿ ಮನ್ ಪರ್ತುನ್ ಪಾಪಾಕ್ನಾ ಸುಟ್ಕಾ ಘೆವ್ಕ್ ಸಾಟ್ನಿ ದೆವಾನ್ ತೆಕಾ ಅಮ್ಚೊ ರಾಕ್ನಾರಿ ಅನಿ ಮುಂಖಡ್ ಕರುನ್ ಅಪ್ಲ್ಯಾ ಉಜ್ವ್ಯಾ ಬಾಜುಕ್ ಬಸ್ವುನ್ ಘೆಟ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:31
57 ತಿಳಿವುಗಳ ಹೋಲಿಕೆ  

ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.


“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು