Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಹ್ಯಾ ಸಂಗ್ತಿಯಾಕ್ನಿ ಅಮಿಚ್ ಸಾಕ್ಷಿ, ಅಮಿ ಯವ್ಡೆಚ್ ನ್ಹಯ್, ತೆಕಾ ಮಾನುನ್ ಘೆಟಲ್ಲ್ಯಾ ಲೊಕಾಕ್ನಿ ದೆವಾನ್ ದಿಲ್ಲೊ ಪವಿತ್ರ್ ಆತ್ಮೊಬಿ ಸಾಕ್ಷಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:32
17 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು