Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಫಾರಿಜೆವಾನಿತ್ಲೊ ಎಕ್ಲೊ ತಾಂಡ್ಯಾತ್ ಉಟುನ್ ಇಬೆ ರ್‍ಹಾಲೊ ತೆಜೆ ನಾಂವ್ ಗಮಲಿಯೆಲ್, ತೊ ಖಾಯ್ದೆ ಶಿಕ್ವುತಲಿ ಲೊಕಾ ಕರ್‍ತಲೊ ಮಾನುಸ್ ಹೊಲ್ಲೊ, ಅನಿ ಲೊಕಾ ಸಗ್ಳ್ಯಿ ತೆಕಾ ಮಾನಿತ್ ಥೊಡ್ಯಾ ಎಳಾ ಪತರ್ ಅಪೊಸ್ತಲಾಕ್ನಿ ತಾಂಡ್ಯಾತ್ನಾ ಭಾಯ್ರ್ ಧಾಡುಚೆ ಮನುನ್ ತೆನಿ ಲೊಕಾಕ್ನಿ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:34
14 ತಿಳಿವುಗಳ ಹೋಲಿಕೆ  

“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.


ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,


ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,


ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು