ಅಪೊಸ್ತಲರ ಕೃತ್ಯಗಳು 5:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಎಗ್ದಾ ಥೆಯೊದಾಸ್ ಮನ್ತಲ್ಯಾ ನಾವಾಚೊ ಮಾನುಸ್ ಯೆಲ್ಲೆ ತುಮ್ಕಾ ಯಾದ್ ಅಸಿಲ್? ತೆನಿ ಅಪ್ನಾಕುಚ್ ಮೊಟೊ ಮಾನುಸ್ ಮನುನ್ ಘೆಟಲ್ಲ್ಯಾನ್ ಜಗ್ಗೊಳ್-ಜಗ್ಗೊಳ್ ಚಾರ್ಸಿ ಲೊಕಾ ತೆಚ್ಯಾ ವಾಂಗ್ಡಾ ಹೊತ್ತಿ ಹೊಲ್ಯಾರ್ ಬಿ ತೆಕಾ ಮಾರುನ್ ಟಾಕಲ್ಲ್ಯಾನಿ ತೆಚಿ ವಾಂಗ್ಡಿಯಾ ಸಗ್ಳಿ ಪರ್‍ತುನ್ ಪಳುನ್ ಗೆಲೆ ತೆಂಚೆನ್ ಕಾಯ್ಬಿ ಕರುಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |