Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತೆನಿ ಅಪೊಸ್ತಲಾಕ್ನಿ ಭುತ್ತುರ್ ಬಲ್ವುನ್, ಮಾರುನ್, ಜೆಜುಚ್ಯಾ ನಾಂವಾಚ್ಯಾ ವಿಶಯಾತ್ ತುಮಿ ಸಾಂಗುಚೆ ನ್ಹಯ್ ಮನುನ್ ಹುಶ್ಯಾರ್ಕಿ ದಿವ್ನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:40
13 ತಿಳಿವುಗಳ ಹೋಲಿಕೆ  

ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.


ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.


ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.


“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು