Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುಚ್ಯಾ ಶಿಸಾಂಚೊ ಅಂಕೊ ಜಾಸ್ತಿ ಹೊವ್ನನ್ಗೆತ್ ಹೊತ್ತೊ, ಖರೆ ತ್ಯಾ ಎಳಾರ್ ಗ್ರಿಕ್ ಬೊಲ್ತಲ್ಯಾ ಅನಿ ಥೈಚ್ ರಾತಲ್ಯಾ ಜುದೆವಾಂಚ್ಯಾ ಮದ್ದಿ ಝಗ್ಡೊ ಉಟ್ಲೊ, ಗ್ರಿಕ್ ಬೊಲ್ತಲ್ಯಾ ಜುದೆವಾನಿ ಅಪ್ನಾಚ್ಯಾ ಮದ್ಲ್ಯಾ ವಿದವ್ ಬಾಯ್ಕಾಕ್ನಿ ಸದ್ದಿಚ್ಯಾ ವಾಟ್ನಿಚ್ಯಾ ಎಳಾರ್ ಧ್ಯಾನ್ ದಿವ್ನ್ ಹೊಯ್ನಾ ಹೊಲಾ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:1
38 ತಿಳಿವುಗಳ ಹೋಲಿಕೆ  

ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.


ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.


ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.


ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?


ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.


ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.


ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು