Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವರು ಕೆಲವು ಮನುಷ್ಯರಿಗೆ - ಇವನು ಮೋಶೆಗೆ ವಿರೋಧವಾಗಿಯೂ ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವದನ್ನು ಕೇಳಿದೆವೆಂದು ಹೇಳಿರಿ ಎಂಬದಾಗಿ ಬೋಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ತೆಫನನು ಮೋಶೆಗೂ ದೇವರಿಗೂ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುತ್ತಾನೆ; ಅವನ್ನು ನಾವೇ ಕೇಳಿದ್ದೇವೆ!” ಎಂದು ತಿಳಿಸುವಂತೆ ಕೆಲವರಿಗೆ ಹಣಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಸ್ತೆಪನ್ ಮೊಯ್ಜೆಕ್ ಅನಿ ದೆವಾಕ್ ದೊಗ್ಯಾಕ್ನಿ ವಿರೊದ್ ಹೊವ್ನ್ ಬುರ್ಶಿ ಗೊಸ್ಟಿಯಾ ಸಾಂಗ್ತಾ; ತೆ ಅಮಿಚ್ ಆಯಿಕ್ಲಾವ್” ಮನುನ್ ಸಾಂಗುಚೆ ಬಗಾ ಮನುನ್ ಥೊಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಶಿಕ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:11
28 ತಿಳಿವುಗಳ ಹೋಲಿಕೆ  

“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.


ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.


ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು