ಅಪೊಸ್ತಲರ ಕೃತ್ಯಗಳು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |