Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ದೆವಾನ್ ಅಮ್ಕಾ ಸುಟ್ಕಾ ಕರುನ್ ರಾಕ್ವನ್ ಕರುಕ್ ಸಾಟ್ನಿ ಅಪ್ನಾಕ್ ಧಾಡ್ಲಾ ಮನುನ್ ತೆನಿ ಕಳ್ವುನ್ ಘೆಂವ್ದಿ ಮನುನ್ ಮೊಯ್ಜೆನ್ ಚಿಂತ್ಲ್ಯಾನ್, ಖರೆ ತೆನಿ ತೆ ಕಳ್ವುನ್ ಘೆವ್ಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:25
20 ತಿಳಿವುಗಳ ಹೋಲಿಕೆ  

ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.


ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.


ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.


ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.


ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.


ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು