Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಚಾಳಿಸ್ ವರ್ಸಾ ಹೊಲ್ಲ್ಯಾ ಮಾನಾ ದೆವಾಚೊ ದುತ್ ತೆಕಾ ಸಿನಾಯ್ ಮನ್ತಲ್ಯಾ ಗುಂಡಾಚ್ಯಾ ಡಂಗ್ಳಿತ್ ಕಾಟ್ಯಾಂಚ್ಯಾ ಝಿಳಿತ್ ಜಳ್ತಲ್ಯಾ ಆಗಿತ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:30
24 ತಿಳಿವುಗಳ ಹೋಲಿಕೆ  

“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.


ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ


ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.


ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು