Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆ ಹೊವ್ನ್ ಮೊಯ್ಜೆನ್ ಲೊಕಾಕ್ನಿ ಇಜಿಪ್ತಾತ್ನಾ ಬಲ್ವುನ್ ಹಾನ್ಲ್ಯಾನ್ ಅನಿ ತೆನಿ ಇಜಿಪ್ತಾತ್, ತಾಂಬ್ಡ್ಯಾ ಸಮುಂದರಾತ್, ಅನಿ ಚಾಳಿಸ್ ವರ್ಸಾ ಪತರ್ ಡಂಗ್ಳಿತ್ಬಿ ಅಜಾಬಾಚಿ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಲೊಕಾಕ್ನಿ ಫಿಡೆ ಚಾಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:36
38 ತಿಳಿವುಗಳ ಹೋಲಿಕೆ  

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.


ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.


ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.


ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.


ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು