ಅಪೊಸ್ತಲರ ಕೃತ್ಯಗಳು 7:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 “ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ದೆವ್ ಹಾಜಿರ್ ರ್‍ಹಾತಲೆ ಬಿರಾಡಾರುಚ್ ಅಮ್ಚ್ಯಾ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಡಂಗ್ಳಿತ್ ಹೊತ್ತೆ, ಹೆ ಬಿಡಾರ್ ತಯಾರ್ ಕರ್‍ತಲೆ ಕಶೆ ಮನುನ್ ದೆವಾನ್ ಮೊಯ್ಜೆಕ್ ಸಾಂಗಲ್ಯಾನ್, ದೆವಾನ್ ಅಪ್ನಾಕ್ ದಾಕ್ವಲ್ಯಾ ಸಾರ್ಕೆಚ್ ತಯಾರ್ ಕರುಕ್ ಮೊಯ್ಜೆಕ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |