ಅಪೊಸ್ತಲರ ಕೃತ್ಯಗಳು 7:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತೆ ಬಿಡಾರ್ ಅಮ್ಚ್ಯಾ ಪುರ್ವಜ್ಯಾಕ್ನಿ ತೆಂಚ್ಯಾ ಬಾಬಾಂಚ್ಯಾಕ್ನಾ ಗಾವ್ಲೆ ಅನಿ ತೆನಿ ಜೊಶ್ವಾಚ್ಯಾ ಫುಡಾರ್ಕಿತ್ ಹ್ಯಾ ದೆಶಾಕ್ ಹಾನ್ಲ್ಯಾನಿ,ತ್ಯಾ ಯೆಳಾತ್ ಹ್ಯೊ ದೆಶ್ ಅನ್ಯಾ ಲೊಕಾಂಚ್ಯಾ ಹಾತಿತ್ ಹೊತ್ತೊ, ಖರೆ ದೆವಾನ್ ತೆಂಕಾ ಅಮ್ಚ್ಯಾ ಪುರ್ವಜಾಂಚ್ಯಾ ಇದ್ರಾಕುಚ್ ಭಾಯ್ರ್ ಘಾಟ್ಲ್ಯಾನ್ ಅನಿ ದಾವಿದಾಚ್ಯಾ ಯೆಳ್ ಪತರ್ಬಿ ಹೆ ಬಿಡಾರ್ ಥೈಚ್ ಹೊತ್ತೆ. ಅಧ್ಯಾಯವನ್ನು ನೋಡಿ |